ರಾಜ್ಯದಲ್ಲಿರುವ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್‌ಟಿಇ (RTE – Right to Education) ಸೀಟುಗಳ ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
RTE- ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯಬಹುದು. ಪೋಷಕರಿಗೆ ಯಾವುದೇ ಶುಲ್ಕ ಭಾರವಿಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗಲಿದೆ.
ಭಾರತ ಸರ್ಕಾರ 2009ರಲ್ಲಿ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯ್ದೆಯ (RTE Act 2009) ಪ್ರಕಾರ, 6 ರಿಂದ 14 ವರ್ಷದ ವರೆಗಿನ ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಹೊಣೆಗಾರಿಕೆ. ಈ ಕಾಯ್ದೆಯಡಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 25% ಸೀಟುಗಳನ್ನು ಮೀಸಲಿಡಲಾಗಿದೆ.
BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…
ಯಾರೆಲ್ಲ ಈ ಅವಕಾಶ ಪಡೆಯಲು ಅರ್ಹರು?
- ಅರ್ಜಿದಾರರ ಮಕ್ಕಳು ಮತ್ತು ಪೋಷಕರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
- ವಿದ್ಯಾರ್ಥಿಗಳ ವಯಸ್ಸು ನರ್ಸರಿ ಹಂತಕ್ಕೆ 3 ರಿಂದ 5 ವರ್ಷ ಮತ್ತು 1ನೇ ತರಗತಿಗೆ 5 ರಿಂದ 7 ವರ್ಷ ನಡುವೆಯಾಗಿರಬೇಕು.
- ಪೋಷಕರ ವಾರ್ಷಿಕ ಆದಾಯ ರೂ. 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಗಳ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು
ಪೋಷಕರು ತಮ್ಮ ಮಕ್ಕಳಿಗೆ ಆರ್‌ಟಿಇ ಸೀಟುಗಳಿಗಾಗಿ ಅರ್ಜಿ ಸಲ್ಲಿಸುವಾಗ ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು:
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ
- ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ನಿವಾಸ ದೃಢೀಕರಣ
- ರೇಶನ್ ಕಾರ್ಡ್ ಪ್ರತಿ

Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…
ಅರ್ಜಿ ಸಲ್ಲಿಸುವ ವಿಧಾನ
ಇಲಾಖೆಯ ಅಧಿಕೃತ ವೆಬ್‌ಸೈಟ್ schooleducation.karnataka.gov.in ಮೂಲಕ ಪೋಷಕರು ತಮ್ಮ ಮಕ್ಕಳನ್ನು ಆರ್‌ಟಿಇ ಸೀಟುಗಳಿಗೆ ನೋಂದಾಯಿಸಬಹುದಾಗಿದೆ. ಮೊದಲಿಗೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಮುಖಪುಟದಲ್ಲಿ ಲಭ್ಯವಿರುವ ‘ಆರ್‌ಟಿಇ ಪ್ರವೇಶ ಅರ್ಜಿ’ ಲಿಂಕ್ ಮೇಲೆ ಕ್ಲಿಕ್ ಮಾಡಿ. ವಿದ್ಯಾರ್ಥಿಯ ವಿವರಗಳನ್ನು ಪೂರೈಸಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಸಲ್ಲಿಕೆಯನ್ನು ಪರಿಶೀಲಿಸಿ ಮತ್ತು ‘Submit’ ಬಟನ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ನಕಲು ಡೌನ್‌ಲೋಡ್ ಮಾಡಿ.
ಆಯ್ಕೆ ವಿಧಾನ ಹೇಗೆ?
ಅರ್ಜಿ ಸಲ್ಲಿಸಿದ ನಂತರ, ಶಿಕ್ಷಣ ಇಲಾಖೆ ಅಧಿಕಾರಿಗಳು ಅರ್ಜಿ ಪರಿಶೀಲನೆ ನಡೆಸಿ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸುತ್ತಾರೆ. ಈ ಪಟ್ಟಿಯಲ್ಲಿ ಆಯ್ಕೆಯಾದ ಮಕ್ಕಳನ್ನು ಲಾಟರಿ ವ್ಯವಸ್ಥೆ (Lottery System) ಮೂಲಕ ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತದೆ. ಲಾಟರಿಯಲ್ಲಿ ಆಯ್ಕೆಯಾಗಿದ ಮಕ್ಕಳನ್ನು ಪೋಷಕರು ನಿರ್ಧಿಷ್ಟ ದಿನಾಂಕದೊಳಗೆ ಆಯ್ಕೆಗೊಂಡ ಶಾಲೆಯಲ್ಲಿ ದಾಖಲಿಸಬೇಕು.
East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಶಾಲಾ ಶಿಕ್ಷಣ ಇಲಾಖೆಯು 2025-26ನೇ ಸಾಲಿನ ಆರ್‌ಟಿಇ ಪ್ರವೇಶ ಪ್ರಕ್ರಿಯೆಗೆ ಈ ಕೆಳಗಿನ ದಿನಾಂಕ ನಿಗದಿಪಡಿಸಿದೆ:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 05 ಏಪ್ರಿಲ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 12 ಮೇ 2025
- ಲಾಟರಿ ಮೂಲಕ ಸೀಟು ಹಂಚಿಕೆ ದಿನಾಂಕ – 17 ಮೇ 2025
- ಅರ್ಹ ವಿದ್ಯಾರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕ – 21 ಮೇ 2025
- ಶಾಲೆಯನ್ನು ದಾಖಲಿಸಲು ಕೊನೆ ದಿನಾಂಕ – 31 ಮೇ 2025
ಆರ್‌ಟಿಇ ಸೀಟುಗಳು ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ದೊರಕಿಸುವ ಮಹತ್ವದ ಅವಕಾಶವಾಗಿದೆ. ಪೋಷಕರು ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬಹುದು. ಅಧಿಕೃತ ದಿನಾಂಕಗಳಿಗೆ ಅನುಗುಣವಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ…
ಸರ್ಕಾರದ ಸುತ್ತೋಲೆ: Download
Karnataka 2nd PUC Result 2025- ದ್ವಿತೀಯ ಪಿಯುಸಿ ಫಲಿತಾಂಶ 2025 | ಮಹತ್ವದ ಮಾಹಿತಿ ಇಲ್ಲಿದೆ…