2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ (Right to Education Act – RTE) ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (Right to Education Act – RTE) ಅಡಿಯಲ್ಲಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 1ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಕೆ ಆರಂಭಿಸಿದೆ.
ಸದರಿ ಆರ್‌ಟಿಇ ಯೋಜನೆಯಿಂದ ಬಡ ಮಕ್ಕಳಿಗೆ ಉಚಿತ ಖಾಸಗಿ ಶಿಕ್ಷಣ ಸಿಗುತ್ತದೆ. ಪೋಷಕರಿಗೆ ಯಾವುದೇ ಶುಲ್ಕ ಭಾರವಿಲ್ಲದೆ ಮಕ್ಕಳನ್ನು ದೊಡ್ಡ ಶಾಲೆಗಳಲ್ಲಿ ಸೇರಿಸಲು ಅವಕಾಶ. ಗ್ರಾಮೀಣ ಭಾಗದ ಮಕ್ಕಳು ಸಹ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ. ಹೀಗಾಗಿ ಇದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಸುವರ್ಣಾವಕಾಶವಾಗಿದೆ.
Govt Loan Schemes- ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು
ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ
ಭಾರತ ಸರ್ಕಾರವು 2009ರಲ್ಲಿ ಜಾರಿಗೆ ತಂದ ‘ಶಿಕ್ಷಣ ಹಕ್ಕು ಕಾಯ್ದೆಯ (RTE Act 2009) ಉದ್ದೇಶ, ದೇಶದ ಪ್ರತಿಯೊಬ್ಬ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಾಗಿದೆ. ಈ ಕಾಯ್ದೆಯಡಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕನಿಷ್ಠ 25% ಸೀಟುಗಳನ್ನು ಬಿಪಿಎಲ್ (BPL) ಹಾಗೂ ಹಿಂದುಳಿದ ವರ್ಗದ ಮಕ್ಕಳಿಗಾಗಿ ಮೀಸಲಿಡಲಾಗಿದೆ.
ಈ ಯೋಜನೆಯ ಮೂಲಕ ಬಡ ಮಕ್ಕಳೂ ಸಹ ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವೃದ್ಧಿಪಡಿಸಲು ಉತ್ತಮ ಶಿಕ್ಷಣ ಪಡೆಯಬಹುದು. ಇದು ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಅವಕಾಶವನ್ನು ಉಂಟುಮಾಡುವ ದೃಷ್ಟಿಯಿಂದ ಮಹತ್ವಪೂರ್ಣ ಹೆಜ್ಜೆಯಾಗಿದ್ದು, ಅದರ ಪ್ರಯೋಜನವನ್ನು ಗ್ರಾಮೀಣ ಹಾಗೂ ಶೋಷಿತ ಸಮುದಾಯದ ಪೋಷಕರು ಪಡೆಯಬಹುದಾಗಿದೆ.
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಅರ್ಹ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರವು ಈ ಯೋಜನೆ ರೂಪಿಸಿದ್ದು, ಈ ಕೆಳಗಿನ ಅರ್ಹತೆಗಳು ಇರುವವರು ಅರ್ಜಿ ಸಲ್ಲಿಸಬಹುದು:
- ಪೋಷಕರು ಮತ್ತು ಮಕ್ಕಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ಎಲ್‌ಕೆಜಿ (ನರ್ಸರಿ)ಗೆ ಮಕ್ಕಳ ವಯಸ್ಸು 3 ರಿಂದ 5 ವರ್ಷಗಳೊಳಗೆ, 1ನೇ ತರಗತಿಗೆ ವಯಸ್ಸು 5 ರಿಂದ 7 ವರ್ಷಗಳೊಳಗೆ ಇರಬೇಕು.
- ಪೋಷಕರ ವಾರ್ಷಿಕ ಆದಾಯ ರೂ.2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಮಾತ್ರ ಅರ್ಹರಾಗಿರುತ್ತಾರೆ.
SSLC 2025 Results- SSLC ಫಲಿತಾಂಶ | ಮೌಲ್ಯಮಾಪನ, ರಿಸೆಲ್ಟ್ ಕುರಿತ KSEAB ಪ್ರಮುಖ ಮಾಹಿತಿ ಇಲ್ಲಿದೆ…

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ
- ಪಾಸ್‌ಪೋರ್ಟ್ ಅಳತೆಯ ಫೋಟೊ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ನಿವಾಸ ದೃಢೀಕರಣ (ರೇಶನ್ ಕಾರ್ಡ್ ಇತ್ಯಾದಿ)
- ಪೋಷಕರ ಆಧಾರ್ ಕಾರ್ಡ್ ಪ್ರತಿ
ಅರ್ಜಿ ಸಲ್ಲಿಸುವ ವಿಧಾನ
ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಪೋಷಕರು ತಮ್ಮ ಮಕ್ಕಳನ್ನು ಆರ್‌ಟಿಇ ಸೀಟುಗಳಿಗೆ ನೋಂದಾಯಿಸಬಹುದಾಗಿದೆ. ಮೊದಲಿಗೆ ನಾವು ಈ ಲೇಖನದ ಕೆಳಗೆ ನೀಡಿರುವ ಲಿಂಕ್ ಮೂಲಕ Application Submission for RTE 2025 Admission Process ಅಧಿಕೃತ ಜಾಲತಾಣ ಪೇಜ್’ಗೆ ಭೇಟಿ ನೀಡಿ.
ಮುಖಪುಟದಲ್ಲಿ ಲಭ್ಯವಿರುವ ಪ್ರವೇಶ ಪಡೆಯುವ ಮಗುವಿನ ಆಧಾರ್ ಕಾರ್ಡ್ ಇದ್ದರೆ ಅದರ ಕೆವೈಸಿ ದೃಢೀಕರಿಸಿ. ಇಲ್ಲದಿದ್ದರೆ ನೇರವಾಗಿ ವಿದ್ಯಾರ್ಥಿಯ ವಿವರಗಳನ್ನು ದಾಖಲಿಸಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಅರ್ಜಿಯನ್ನು ಪರಿಶೀಲಿಸಿ ಹಾಗೂ Submit ಬಟನ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆ ಪ್ರಕಾರ ಅರ್ಜಿ ಸಲ್ಲಿಕೆ, ಅರ್ಜಿ ಪರಿಶೀಲನೆ, ಸೀಟು ಹಂಚಿಕೆಯ ವೇಳಾಪಟ್ಟಿ ಈ ಕೆಳಗಿನಂತಿದೆ:
- ಏಪ್ರಿಲ್ 15-ಮೇ 12ರ ವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ
- ಮೇ 14ರ ವರೆಗೆ ಅರ್ಜಿಗಳ ದಾಖಲಾತಿ ಪರಿಶೀಲನೆ
- ಮೇ 17ರಂದು ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
- ಮೇ 21ರಂದು ಮೊದಲ ಸುತ್ತಿನ ಸೀಟು ಹಂಚಿಕೆ
ಆರ್‌ಟಿಇ ಅರ್ಜಿ ಸಲ್ಲಿಸುವ ವೇಳೆ ಸಮಸ್ಯೆ ಉಂಟಾದಲ್ಲಿ ನ್ಯೂನತೆ ಸರಿಪಡಿಸಲು ತಂತ್ರಾ೦ಶ ಅಭಿವೃದ್ಧಿಪಡಿಸಲಾಗಿದೆ. ಈ ತಂತ್ರಾAಶದಲ್ಲಿ ನಿರ್ದಿಷ್ಟ ದೂರುಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ ಹೇಗೆ?
ಅರ್ಜಿ ಸಲ್ಲಿಕೆಗೆ ನಂತರ, ಅರ್ಜಿಗಳನ್ನು ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆ ಮೇ 17ರಂದು ಪ್ರಕಟಿಸುತ್ತದೆ. ನಂತರ, ಲಾಟರಿ ಆಧಾರಿತ ವ್ಯವಸ್ಥೆ ಮೂಲಕ ಸೀಟುಗಳನ್ನು ಹಂಚಲಾಗುತ್ತದೆ. ಲಾಟರಿ ಆಧಾರಿತ ಆಯ್ಕೆಯಾದ ಮಕ್ಕಳು ಮೇ 21ರೊಳಗೆ ಆಯ್ಕೆಯಾದ ಶಾಲೆಗೆ ಪ್ರವೇಶ ಪಡೆಯಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಲಿಂಕ್: Apply Now
Free Electric Scooter- ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ | ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…