ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ವಿವಿಧ ಎಸ್‌ಬಿಐ (SBI Bengaluru Recruitment 2025) ಶಾಖೆಗಳಲ್ಲಿ 104 ಹುದ್ದೆಗಳ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ…
ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಒಟ್ಟು 996 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.
ಒಟ್ಟು 996 ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಬೆಂಗಳೂರಿನಲ್ಲಿ ಒಟ್ಟು 104 ಹುದ್ದೆಗಳ ಭರ್ತಿ ನಡೆಯಲಿದೆ. ಆಸಕ್ತರು ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 23ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: Anganwadi Recruitment 2025- ಮಹಿಳೆಯರಿಗೆ ಅಂಗನವಾಡಿ ಹುದ್ದೆಗಳು | 571 ಹುದ್ದೆಗಳಿಗೆ ಅರ್ಜಿ ಆಹ್ವಾನ
ಒಟ್ಟು ಹುದ್ದೆಗಳ ವಿವರ
- ವಿ.ಪಿ ವೆಲ್ತ್ (Vice President – Wealth -SRM): 506
- ಎವಿಪಿ ವೆಲ್ತ್ (Assistant Vice President – Wealth -RM): 206
- ಕಸ್ಟಮರ್ ರಿಲೇಷನ್‌ಷಿಪ್ ಆಫೀಸರ್ (Customer Relationship Officer): 284
- ಒಟ್ಟು ಹುದ್ದೆಗಳು: 966
ಬೆಂಗಳೂರಿಗೆ ಮೀಸಲಾದ ಹುದ್ದೆಗಳ ವಿವರ
- ವಿ.ಪಿ ವೆಲ್ತ್ (SRM): 53
- ಎವಿಪಿ ವೆಲ್ತ್ (RM): 22
- ಕಸ್ಟಮರ್ ರಿಲೇಷನ್‌ಷಿಪ್ ಆಫೀಸರ್: 29
- ಒಟ್ಟು ಹುದ್ದೆಗಳು: 104
ಇದನ್ನೂ ಓದಿ: Constable GD Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕಾನ್‌ಸ್ಟೆಬಲ್ ಹುದ್ದೆಗಳು | 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ ಮಾಹಿತಿ
ಪದವಿಯನ್ನು ಕನಿಷ್ಠ ಶೇ.60 ಅಂಕಗಳೊಂದಿಗೆ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ಇದೆ. ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಕಾಲೇಜಿನಿಂದ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ 5 ವರ್ಷ ಅನುಭವವನ್ನು ಪಡೆದಿರಬೇಕು.

ವಯೋಮಿತಿ ವಿವರ
ಕನಿಷ್ಠ 23ರಿಂದ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜತೆಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಹುದ್ದೆಗಳ ಅನುಸಾರವಾಗಿ ವಯೋಮಿತಿಯಲ್ಲಿ ವ್ಯತ್ಯಾಸಗಳಿವೆ. ಹಾಗೂ ನಿಯಮಾನುಸಾರ ಎಸ್‌ಸಿ/ಎಸ್‌ಟಿ ವರ್ಗದ ಅಬೈರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಸಾಮಾನ್ಯ ವರ್ಗ, ಒಬಿಸಿ, ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಉಳಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿಯಿದೆ. ಈ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ನಿಗದಿತ ಅವಧಿಯಲ್ಲಿ ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಸಂದರ್ಶನಕ್ಕೆ ಆಹ್ವಾನಿಸಿ ಮೆರಿಟ್ ಹಾಗೂ ಮೀಸಲು ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Digital E-Stamp Karnataka- ಇನ್ಮುಂದೆ ಮೊಬೈಲ್‌ನಲ್ಲೇ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸಿ | ಸಂಪೂರ್ಣ ಮಾಹಿತಿ ಇಲ್ಲಿದೆ…
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 23-12-2025
ವೇತನ ಶ್ರೇಣಿ, ಸರ್ಕಾರಿ ಸವಲತ್ತುಗಳು, ಪರೀಕ್ಷೆ ವಿವರ ಸೇರಿದಂತೆ ಇತ್ಯಾದಿ ಸಮಗ್ರ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ…
- ಅಧಿಸೂಚನೆ: Download
- ಅಧಿಕೃತ ವೆಬ್‌ಸೈಟ್: sbi.bank.in
PhonePe Personal Loan- ₹5 ಲಕ್ಷದ ವರೆಗೆ ಫೋನ್‌ಪೇ ಪರ್ಸನಲ್ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಹಾಕಿ…