EducationNews

SBI Platinum Jubilee Asha Scholarship- 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ | 75,000 ರೂ. ವರೆಗೆ ಆರ್ಥಿಕ ನೆರವು

SBI Platinum Jubilee Asha Scholarship 2025-26

Spread the love

9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ (SBI Platinum Jubilee Asha Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಎಸ್‌ಬಿಐ ಫೌಂಡೇಶನ್‌ನ (SBI Foundation) 2025-26ನೇ ಸಾಲಿನ ‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು; ಎಲ್ಲಾ ಹಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ ನೆರವು ನೀಡಲಾಗುತ್ತಿದೆ.

2015ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ‘ಎಸ್‌ಬಿಐ ಫೌಂಡೇಶನ್’ ಸ್ಥಾಪಿಸಲಾಗಿದ್ದು; ಸದರಿ ಫೌಂಡೇಶನ್ ಮೂಲಕ ಭಾರತದ ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ರಂಗದ ವಿವಿಧ ಸುಧಾರಣಾ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.

ಇದನ್ನೂ ಓದಿ: PF 100 Percent Withdrawal – ಇನ್ಮುಂದೆ 100% ಪಿಎಫ್ ಹಣ ಹಿಂಪಡೆಯಲು ಅವಕಾಶ | ಉದ್ಯೋಗಿಗಳಿಗೆ ಶುಭಸುದ್ದಿ

ಯಾವೆಲ್ಲ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಆರ್ಥಿಕ ನೆರವು?

‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ವು ಶಾಲಾ ಹಂತದಿಂದ ವಿದೇಶಿ ಶಿಕ್ಷಣದ ಹಂತದ ವರೆಗೂ ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ವಿವಿಧ ಪ್ರತ್ಯೇಕ ಸ್ಕಾಲರ್‌ಶಿಪ್ ಯೋಜನೆಗಳನ್ನು ಆಯೋಜಿಸಲಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚಗಳಿಗೆ 15,000 ರೂ.ದಿಂದ 20 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಬಹುದು. ಯಾವೆಲ್ಲ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಆರ್ಥಿಕ ನೆರವು ನೀಡಲಾಗುತ್ತದೆ ಎಂವ ವಿವರ ಹೀಗಿದೆ:

  • 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ: 15,000
  • ಪದವಿಪೂರ್ವ ವಿದ್ಯಾರ್ಥಿಗಳಿಗೆ: 75,000
  • ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: 2,50,000
  • ವೈದ್ಯಕೀಯ ವಿದ್ಯಾರ್ಥಿಗಳಿಗೆ: 4,50,000
  • ಐಐಟಿ ವಿದ್ಯಾರ್ಥಿಗಳಿಗೆÀ: 2,00,000
  • ಐಐಎಂ ವಿದ್ಯಾರ್ಥಿಗಳಿಗೆ: 5,00,000
  • ಸಾಗರೋತ್ತರ ವಿದ್ಯಾರ್ಥಿಗಳಿಗೆ: 20,00,000

ಇಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಗಳ ಬಗ್ಗೆ ವಿವರವಾಗಿ ತಿಳಿಯೋಣ.

ಇದನ್ನೂ ಓದಿ: Sainik School Admission 2026- 6 ಮತ್ತು 9ನೇ ತರಗತಿ ಮಕ್ಕಳಿಗೆ ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಿ….

9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಹತೆಗಳೇನು?
  • ಅರ್ಜಿದಾರರು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 9 ರಿಂದ 12ನೇ ತರಗತಿಗಳಲ್ಲಿ ಓದುತ್ತಿರಬೇಕು.
  • ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಅರ್ಜಿದಾರರ ಕುಟುಂಬದ ಒಟ್ಟು ವಾರ್ಷಿಕ ಆದಾಯ 3,00,000 ರೂಪಾಯಿಗಳ ಮಿತಿಯಲ್ಲಿರಬೇಕು.
9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ...
SBI Platinum Jubilee Asha Scholarship 2025
ಪದವಿಪೂರ್ವ ವಿದ್ಯಾರ್ಥಿಗಳಿಗೆ ಅರ್ಹತೆಗಳೇನು?
  • ಭಾರತದ ಪ್ರಮುಖ ವಿಶ್ವವಿದ್ಯಾಲಯ/ಕಾಲೇಜಿನಿಂದ ಅರ್ಜಿದಾರರು ಪದವಿಪೂರ್ವ ಕೋರ್ಸ್ ಅನ್ನು (ಯಾವುದೇ ವರ್ಷ) ಓದುತ್ತಿರಬೇಕು.
  • ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇ.75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಅರ್ಜಿದಾರರ ಕುಟುಂಬದ ಒಟ್ಟು ವಾರ್ಷಿಕ ಆದಾಯ 6,00,000 ರೂ. ವರೆಗೆ ಇರಬೇಕು.

    ಗಮನಿಸಿ: ಈ ಎರಡೂ ವಿದ್ಯಾರ್ಥಿವೇತನಕ್ಕೆ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫಲಿತಾಂಶ ಸಡಿಲಿಕೆ ಇದೆ. ಶೇ.50ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಶೇ. 25ರಷ್ಟು ಎಸ್‌ಸಿ ಹಾಗೂ ಶೇ. 25ರಷ್ಟು ಎಸ್‌ಟಿ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.

ಇದನ್ನೂ ಓದಿ: Infosys Foundation STEM Scholarship- ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಸಲ್ಲಿಸಿ…

ಬೇಕಾಗುವ ದಾಖಲೆಗಳು
  • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  • ಆಧಾರ್ ಕಾರ್ಡ್
  • ಪ್ರಸ್ತುತ ವರ್ಷದ ಶುಲ್ಕ ರಶೀದಿ
  • ಪ್ರಸ್ತುತ ವರ್ಷದ ಪ್ರವೇಶದ ಪುರಾವೆ
  • ಪೋಷಕರ ಬ್ಯಾಂಕ್ ಖಾತೆ ವಿವರಗಳು
  • ಆದಾಯ ಪ್ರಮಾಣ ಪತ್ರ
  • ಅರ್ಜಿದಾರರ ಛಾಯಾಚಿತ್ರ
  • ಜಾತಿ ಪ್ರಮಾಣಪತ್ರ
ಹೇಗೆ ಅರ್ಜಿ ಸಲ್ಲಿಸಬೇಕು?
  • ನಾವು ಈ ಲೇಖನದ ಕೊನೆಯಲ್ಲಿ ನೀಡಿರುವ ಅರ್ಜಿ ಲಿಂಕ್ ಬಳಸಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
  • ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ‘SBI Platinum Jubilee Asha Scholarship 2025-26’ ಪುಟ ತೆರೆದುಕೊಳ್ಳುತ್ತದೆ.
  • ಅಲ್ಲಿ ಮುಖಪುಟದಲ್ಲಿ ಕಾಣುವ ‘Apply Now’ ಬಟನ್ ಕ್ಲಿಕ್ ಮಾಡಿದರೆ ಆನ್‌ಲೈನ್ ಅರ್ಜಿ ನಮೂನೆ ಪುಟಕ್ಕೆ ಹೋಗಲು ನಿಮ್ಮ ನೋಂದಾಯಿತ ಐಡಿ ಬಳಸಿ ಲಾಗಿನ್ ಮಾಡಬೇಕು.
  • ಒಂದು ವೇಳೆ ನೀವು ನೋಂದಾಯಿಸದಿದ್ದರೆ, ನಿಮ್ಮ ಇಮೇಲ್/ಮೊಬೈಲ್/ಜಿಮೇಲ್ ಖಾತೆಯೊಂದಿಗೆ ನೋಂದಾಯಿಸಿಕೊಳ್ಳಬೇಕು.
  • ನೋಂದಣಿಯ ನಂತರ ‘SBI Platinum Jubilee Asha Scholarship 2025-26’ ಅರ್ಜಿ ನಮೂನೆ ಪುಟ ತೆರೆದುಕೊಳ್ಳುತ್ತದೆ.
  • ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ‘Terms and Conditions’ ಸ್ವೀಕರಿಸಿ ಮತ್ತು ‘Preview’ ಮೇಲೆ ಕ್ಲಿಕ್ ಮಾಡಿ.
  • ಆಗ ನೀವು ಭರ್ತಿ ಮಾಡಿದ ಎಲ್ಲಾ ವಿವರಗಳು ಕಾಣಿಸುತ್ತವೆ. ಮತ್ತೊಮ್ಮೆ ಸಂಪೂರ್ಣವಾಗಿ ಪರಿಶೀಲಿಸಿ, ಎಲ್ಲ ಮಾಹಿತಿ ಸರಿಯಾಗಿದ್ದರೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ…

ಅರ್ಜಿ ಸಲ್ಲಿಕೆ ಕೊನೇ ದಿನಾಂಕ: ನವೆಂಬರ್ 15, 2025

ಅರ್ಜಿ ಲಿಂಕ್: Apply Now

KKRTC Conductor Recruitment 2025 – ಪಿಯುಸಿ ಪಾಸಾದವರಿಗೆ ಕೆಕೆಆರ್‌ಟಿಸಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 300 ಹುದ್ದೆಗಳು


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!