Shri Siddheshwar Co-operative Bank Recruitment 2024 : ರಾಜ್ಯದ ಪ್ರತಿಷ್ಠಿತ ಸಹಕಾರ ಬ್ಯಾಂಕುಗಳಲ್ಲಿ ಒಂದಾಗಿರುವ ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಅಟೆಂಡರ್, ಕಿರಿಯ ಸಹಾಯಕರು ಹಾಗೂ ಚಾಲಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ.
10ನೇ ತರಗತಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆ, ಸಂಬಳದ ವಿವರ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸುವ ಲಿಂಕ್ ಹಾಗೂ ಇತರೆ ಪ್ರಮುಖ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ…
Shri Siddheshwar Co-operative Bank Recruitment 2024 ನೇಮಕಾತಿ ಸಂಕ್ಷಿಪ್ತ ವಿವರ
- ನೇಮಕಾತಿ ಸಂಸ್ಥೆ : ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ
- ಖಾಲಿ ಹುದ್ದೆಗಳ ಸಂಖ್ಯೆ : 48
- ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
- ಉದ್ಯೋಗ ಸ್ಥಳ : ವಿಜಯಪುರ ಜಿಲ್ಲೆ
ಹುದ್ದೆಗಳ ವಿವರ
- ಪ್ರಧಾನ ವ್ಯವಸ್ಥಾಪಕರು : 01
- ವ್ಯವಸ್ಥಾಪಕರು : 01
- ಹಿರಿಯ ವ್ಯವಸ್ಥಾಪಕರು : 11
- ಕಂಪ್ಯೂಟರ್ ಇಂಜಿನಿಯರ್ : 01
- ಕಿರಿಯ ವ್ಯವಸ್ಥಾಪಕರು : 04
- ಹಿರಿಯ ಸಹಾಯಕರು : 13
- ಕಿರಿಯ ಸಹಾಯಕರು : 11
- ಅಟೆಂಡರ್ /ಜವಾನ್ /ವಾಚ್ ಮೆನ್ : 05
- ವಾಹನ ಚಾಲಕ : 01
ಶೈಕ್ಷಣಿಕ ಅರ್ಹತೆಗಳು
ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಸಂಬ೦ಧಪಟ್ಟ ವಿಷಯದಲ್ಲಿ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ ಅರ್ಹತೆಗಳು
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದ೦ದು ಕನಿಷ್ಠ 18 ವರ್ಷ ತುಂಬಿದ್ದು ಗರಿಷ್ಠ 35 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಮಾಸಿಕ ವೇತನ
Shri Siddheshwar Co-operative Bank Recruitment 2024 ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು ಹುದ್ದೆಗಳಿಗೆ ಅನುಗುಣವಾಗಿ 14,550 ರೂಪಾಯಿಯಿಂದ 60,600 ರೂಪಾಯಿ ವರೆಗೆ ಇರಲಿದೆ.
ಅರ್ಜಿ ಶುಲ್ಕ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1,200 ರೂಪಾಯಿ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 600 ರೂಪಾಯಿ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ :
04-07-2024 - ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
31-07-2024
ಅಧಿಸೂಚನೆ : Download
ಅರ್ಜಿ ಸಲ್ಲಿಸುವ ಲಿಂಕ್ : Apply Now