ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Results) ಕುರಿತು ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರವನ್ನು ಇಲ್ಲಿ ನೀಡಲಾಗಿದೆ…
ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಇನ್ನು ಕಳೆದ ಮಾರ್ಚ್ 21ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಶುರುವಾಗಿದೆ. ಮೌಲ್ಯಮಾಪನದ ಮೊದಲ ಹಂತವಾದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಮೊನ್ನೆ ಏಪ್ರಿಲ್ 11ರಿಂದ ಆರಂಭವಾಗಿದೆ.
ಏಪ್ರಿಲ್ 15ರಿಂದ ಅಧಿಕೃತವಾಗಿ ಮೌಲ್ಯಮಾಪನ
ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯವು ಮೌಲ್ಯಮಾಪಕರು ಪಕ್ಷಪಾತವಿಲ್ಲದೆ ಅಂದರೆ ಯಾವುದೇ ಆಮಿಷಕ್ಕೆ ಒಳಗಾಗದೇ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲು ವಿದ್ಯಾರ್ಥಿಗಳ ಹೆಸರು, ನೋಂದಣಿ ಸಂಖ್ಯೆ ಮುಂತಾದ ಗುರುತಿನ ಚಿಹ್ನೆಗಳನ್ನು ಗೋಪ್ಯವಾಗಿಡುವ ಉದ್ದೇಶದಿಂದ ನಡೆಸಲಾಗುತ್ತದೆ. ಈ ಕಾರ್ಯ ಏಪ್ರಿಲ್ 11ರಿಂದ ಆರಂಭವಾಗಿದೆ.
ಏಪ್ರಿಲ್ 12 ಮತ್ತು 13 ಶನಿವಾರ, ಭಾನುವಾರ ಎರಡು ದಿನ ವಾರದ ರಜೆ. ಏಪ್ರಿಲ್ 14ರ ಸೋಮವಾರ ಡಾ.ಅಂಬೇಡ್ಕರ್ ಅವರ ಜಯಂತಿ ಇದೆ. ಅಂಬೇಡ್ಕರ್ ಜಯಂತಿಯ ಮರುದಿನವೇ ಅಂದರೆ ಏಪ್ರಿಲ್ 15ರ ಮಗಳವಾರದಿಂದಲೇ ಅಧಿಕೃತವಾಗಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಗಳು ತಿಳಿಸಿವೆ.
ಈ ಜಿಲ್ಲೆಗಳ 917 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

ಏಪ್ರಿಲ್ ಅಂತ್ಯದಲ್ಲೇ ಫಲಿತಾಂಶ
ರಾಜ್ಯದ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿಯಲ್ಲಿನ ಅಧಿಕಾರಿಗಳ ಮಾಹಿತಿ ಪ್ರಕಾರ, ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನವು ಏಪ್ರಿಲ್ 15ರಿಂದ ಬಹುಧರ್ಶ ಒಂದು ವಾರ ಕಾಲ ನಡೆಯಲಿದ್ದು; ಏಪ್ರಿಲ್ ಅಂತ್ಯದಲ್ಲೇ ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ಇದಕ್ಕಾಗಿ ರಾಜ್ಯದಾದ್ಯಂತ 240ಕ್ಕೂ ಹೆಚ್ಚು ಮೌಲ್ಯಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಯಲಿದೆ.
75,000ಕ್ಕೂ ಹೆಚ್ಚು ಶಿಕ್ಷಕರನ್ನು ಮೌಲ್ಯಮಾಪಕರನ್ನಾಗಿ ನಿಯೋಜಿಸಲಾಗಿದೆ. ಈ ಶಿಕ್ಷಕರಲ್ಲಿ ಪ್ರಥಮ ದರ್ಜೆ, ಪ್ರೌಢ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ತಜ್ಞ ಶಿಕ್ಷಕರು ಸೇರಿದ್ದಾರೆ. ಮೌಲ್ಯಮಾಪನ ಕಾರ್ಯದ ಅವಧಿಯಲ್ಲಿ ನಿಯೋಜಿತ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ.
BPL Ration Card- 2.86 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…
ಫಲಿತಾಂಶ ನೋಡುವುದು ಹೇಗೆ?
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.inನಲ್ಲಿ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ. ಪರೀಕ್ಷಾ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.
ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ. Submit ಒತ್ತಿದರೆ ನಿಮ್ಮ ಫಲಿತಾಂಶ ಸಿಗಲಿದೆ. ವಿದ್ಯಾರ್ಥಿಗಳು ಸಂಪೂರ್ಣ ಅಂಕಪಟ್ಟಿ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಎಸ್ಸೆಸ್ಸೆಲ್ಸಿ ಫಲಿತಾಂಶ ಕುರಿತ ನಿಖರ ಮಾಹಿತಿಗಾಗಿ ಮಾಹಿತಿಮನೆ ಡಾಟ್ ಕಾಂ ಫಾಲೋ ಮಾಡಿ…
ಫಲಿತಾಂಶ ವೀಕ್ಷಣೆಯ ವೆಬ್‌ಸೈಟ್‌ಗಳು

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.