ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ (SSLC Topper Laptop Scheme) ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ…
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ (Free Laptop) ವಿತರಣೆಗೆ ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಟಾಪ್ ವಿದ್ಯಾರ್ಥಿಗಳಿಗೆ ಈ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ನಿರ್ಧಾರಿಸಿದೆ.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್‌ಗಳ ಬಳಕೆ ಅನಿವಾರ್ಯವಾಗಿದೆ. ಈ ಯೋಜನೆಯು ಗ್ರಾಮೀಣ ಹಾಗೂ ಬಡ ಕುಟುಂಬಗಳ ಪ್ರತಿಭಾವಂತ ಮಕ್ಕಳಿಗೆ ಡಿಜಿಟಲ್ ಸಾಧನ ಸೌಲಭ್ಯವನ್ನು ಒದಗಿಸುವ ಮೂಲಕ ಅವರ ಭವಿಷ್ಯಕ್ಕೆ ಸಹಾಯ ಮಾಡಲಿದೆ.
Women Loan Subsidy- ಮಹಿಳೆಯರಿಗಾಗಿಯೇ ಇರುವ ಸರ್ಕಾರದ ಸಾಲ ಮತ್ತು ಸಬ್ಸಿಡಿ ಯೋಜನೆಗಳು
ಈ ಬಾರಿಗೆ ಯಾರಿಗೆ ಲ್ಯಾಪ್‌ಟಾಪ್ ಸಿಗಲಿದೆ?
2024ರ ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಪ್ರತಿಯೊಂದು ಶೈಕ್ಷಣಿಕ ಜಿಲ್ಲೆಯಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಈ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತದೆ.
ಜೊತೆಗೆ, ತಾಲ್ಲೂಕು ಮಟ್ಟದಲ್ಲಿಯೂ ಮೊದಲ ಮೂರು ಸ್ಥಾನಗಳ ವಿಜೇತರಿಗೂ ಈ ಯೋಜನೆಯ ಲಾಭ ದೊರೆಯಲಿದೆ. ಹೀಗಾಗಿ ಜಿಲ್ಲಾ ಮಟ್ಟದ 115 ವಿದ್ಯಾರ್ಥಿಗಳು ಹಾಗೂ ಬ್ಲಾಕ್ ಮಟ್ಟದ 641 ವಿದ್ಯಾರ್ಥಿಗಳು ಸೇರಿ ಒಟ್ಟು 756 ಪ್ರತಿಭಾವಂತರು ಲ್ಯಾಪ್‌ಟಾಪ್ ಪಡೆಯಲಿದ್ದಾರೆ.
ಅನುದಾನದ ಸ್ಥಿತಿ ಹಾಗೂ ಸರ್ಕಾರದ ನಿರೀಕ್ಷೆ
ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸರಬರಾಜುದಾರರನ್ನೂ ಈಗಾಗಲೇ ಆಯ್ಕೆ ಮಾಡಲಾಗಿದೆ. ಈ ಲ್ಯಾಪ್‌ಟಾಪ್‌ಗಳ ಖರೀದಿಗಾಗಿ ಒಟ್ಟು ₹3.25 ಕೋಟಿಗೂ ಅಧಿಕ ಅನುದಾನ ಅಗತ್ಯವಿದೆ.
ಈಗಾಗಲೇ ₹80 ಲಕ್ಷ ಬಿಡುಗಡೆ ಮಾಡಲಾಗಿದ್ದು, ಉಳಿದ ₹200 ಲಕ್ಷ ಬಿಡುಗಡೆಗೊಳ್ಳಬೇಕಾಗಿದೆ. ಜೊತೆಗೆ, ಮಂಡಳಿಯ ಅನುದಾನದಲ್ಲಿ ಉಳಿದಿರುವ ₹35.86 ಲಕ್ಷ ಹಾಗೂ ಕೆ.ಎಸ್.ಕ್ಯೂ.ಎ.ಎ.ಸಿ ವಿಭಾಗದಲ್ಲಿ ಇರುವ ₹9.30 ಲಕ್ಷ ಬಳಸುವಂತೆ ಸರ್ಕಾರಕ್ಕೆ ಮಂಡಳಿ ಮನವಿ ಸಲ್ಲಿಸಿದೆ.

ಏನಿದು ಉಚಿತ ಲ್ಯಾಪ್‌ಟಾಪ್ ಯೋಜನೆ?
ಈ ಯೋಜನೆಯನ್ನು ಕರ್ನಾಟಕ ಸರ್ಕಾರವು 2010ರಲ್ಲಿ ಪ್ರಾರಂಭಿಸಿತ್ತು. ಆರಂಭದಲ್ಲಿ ಡೆಸ್ಕ್ಟಾಪ್‌ಗಳನ್ನು ವಿತರಿಸಲಾಗುತ್ತಿತ್ತು. ಆದರೆ ತಂತ್ರಜ್ಞಾನದಲ್ಲಿ ಬದಲಾವಣೆ ಹಾಗೂ ಪೋರ್ಟ್ಬ್ಲಿಟಿಯ ಅಗತ್ಯತೆಯಿಂದ ಈಗ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ.
2012ರಿಂದ ತಾಲ್ಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಯೋಜನೆ ವಿಸ್ತರಿಸಲಾಯಿತು. ಈ ಮಧ್ಯೆ ಕೋವಿಡ್-19 ಅವಧಿಯಲ್ಲಿ ಯೋಜನೆಗೆ ತಾತ್ಕಾಲಿಕ ವಿರಾಮವಿತ್ತು. ಆದರೆ ಈಗ ಯೋಜನೆ ಪುನಃ ಚುರುಕುಗೊಂಡಿದ್ದು, 2024ರ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಲ್ಯಾಪ್‌ಟಾಪ್ ವಿತರಣೆ ನಡೆಯಲಿದೆ.
ಲ್ಯಾಪ್‌ಟಾಪ್ ವಿತರಣೆ ಯಾವಾಗ?
ಪ್ರತೀ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ಬಳಿಕ 2-3 ತಿಂಗಳಲ್ಲಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿತ್ತು. ಕಳೆದ ಸಾಲಿನಲ್ಲಿ ತಾಂತ್ರಿಕ ದೋಷದ ನಿಮಿತ್ತ ಲ್ಯಾಪ್‌ಟಾಪ್ ವಿತರಣೆ ತಡವಾಗಿದ್ದು; ಇದೀಗ ಸರ್ಕಾರದಿಂದ ಅನುಮತಿ ಸಿಕ್ಕ ತಕ್ಷಣ ವಿತರಣಾ ಪ್ರಕ್ರಿಯೆ ಆರಂಭವಾಗಲಿದೆ.
ಈ ಯೋಜನೆ ಸ್ವಯಂಚಾಲಿತವಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಬAಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ಅಥವಾ ಜಿಲ್ಲಾ ಶಿಕ್ಷಣಾಧಿಕಾರಿಗಳ ಮೂಲಕ ಲ್ಯಾಪ್‌ಟಾಪ್ ವಿತರಣೆಯ ಮಾಹಿತಿ ನೀಡಲಾಗುತ್ತದೆ.
Akshaya Tritiya 2025- ಅಕ್ಷಯ ತೃತೀಯ 2025: ಚಿನ್ನಾಭರಣ ಖರೀದಿಗೆ 12,000 ರೂ. ವರೆಗೂ ಭರ್ಜರಿ ಆಫರ್
ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳು
ಎಸ್‌ಎಸ್‌ಎಲ್‌ಸಿ ಟಾಪರ್ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್ ನಿರೀಕ್ಷೆಯಲ್ಲಿ ಇದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಆಧಾರಿತ ಪ್ರಗತಿ ಸಾಧ್ಯವಾಗಲಿದೆ. ಶೀಘ್ರದಲ್ಲೇ ಲ್ಯಾಪ್‌ಟಾಪ್ ವಿತರಣೆಗೆ ಸಂಬAಧಿಸಿದ ಅಧಿಕೃತ ವೇಳಾಪಟ್ಟಿ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆ ಕುರಿತ ದಾಖಲೆಗಳನ್ನು ತಾವು ವ್ಯಾಸಂಗ ಮಾಡಿದ ಶಾಲೆಯಲ್ಲಿ ನಿಖರವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ಯಾವುದೇ ಪ್ರಶ್ನೆಗಳಿದ್ದರೆ ಶಾಲಾ ಆಡಳಿತ ಮಂಡಳಿ ಅಥವಾ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು.
ಉಚಿತ ಲ್ಯಾಪ್‌ಟಾಪ್ ವಿತರಣೆ ಕುರಿತು ಕರ್ನಾಟಕ ಸರ್ಕಾರದ ನಡಾವಳಿಯನ್ನು ಇಲ್ಲಿ Download ಮಾಡಿ…
SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.