Udhyogini Yojana 2025 – ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ 3 ಲಕ್ಷ ರೂ. ಬಡ್ಡಿ ಇಲ್ಲದ ಸಾಲ ಸೌಲಭ್ಯ | ಮಹಿಳಾ ನಿಗಮದಿಂದ ಅರ್ಜಿ ಆಹ್ವಾನ
Udhyogini Yojana 2025

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ (Udhyogini Yojana 2025 ) 3 ಲಕ್ಷ ರೂ. ಬಡ್ಡಿರಹಿತ ಸಾಲ ಸೌಲಭ್ಯ ಕುರಿತ ಮಾಹಿತಿ ಇಲ್ಲಿದೆ…
ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಸಹಾಯಧನ ಸೌಲಭ್ಯ ನೀಡುತ್ತಿದೆ. ಈ ಯೋಜನೆಯಲ್ಲಿ ಸಾಲ ಪಡೆಯುವುದು ಹೇಗೆ? ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…
ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಸರಕಾರ 3 ಲಕ್ಷ ರೂಪಾಯಿ ವರೆಗೂ ಸಾಲ ಸೌಲಭ್ಯ ನೀಡಲಾಗುತ್ತಿದೆ. ವಿಶೇಷವೆಂದರೆ ಈ ಸಾಲಕ್ಕೆ ಯಾವುದೇ ರೀತಿಯ ಬಡ್ಡಿ ಇಲ್ಲ! ಜೊತೆಗೆ ಅರ್ಧ ಸಾಲ ಮನ್ನಾ ಆಗಲಿದೆ. ಅಂದರೆ ಬರೋಬ್ಬರಿ ಒಂದೂವರೆ ಲಕ್ಷ ರೂಪಾಯಿ ವರೆಗೂ ಸಾಲ ಮರುಪಾವತಿಸುವ ಅಗತ್ಯವಿಲ್ಲ.
ಇದು ಉದ್ಯೋಗಿನಿ ಯೋಜನೆ
ಮಹಿಳಾ ಉದ್ಯಮಿಗಳನ್ನು ಉತ್ತೇಜಿಸುವ, ಆ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡುವ ಸದುದ್ದೇಶದಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ‘ಉದ್ಯೋಗಿನಿ’ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು, ಸದರಿ ಯೋಜನೆಯಡಿ ಒಟ್ಟು 88 ವಿಧದ ಕಿರು ಉದ್ಯಮ ಸ್ಥಾಪಿಸಲು 3 ಲಕ್ಷ ರೂಪಾಯಿ ವರೆಗೂ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.
ಇದನ್ನೂ ಓದಿ: Muthoot M George Higher Education Scholarship 2025- ಮುತ್ತೂಟ್ ಫೈನಾನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಯಾರಿಗೆ ಎಷ್ಟು ಸಹಾಯಧನ?
ಸಾಮಾನ್ಯ ವರ್ಗದ ಎಲ್ಲ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಇವರಿಗೆ ಘಟಕ ವೆಚ್ಚ ಗರಿಷ್ಟ 3 ಲಕ್ಷ ರೂಪಾಯಿಗಳಾಗಿದ್ದು ಶೇ.30ರಷ್ಟು ಸಹಾಯಧನ ಸಿಗಲಿದೆ. ಅಂದರೆ ಶೇ.30ರಷ್ಟು ಸಾಲವನ್ನು ಮರುಪಾವತಿಸುವಂತಿಲ್ಲ. ಆ ಹಣ ಮನ್ನಾ ಆಗಲಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ಕನಿಷ್ಟ 1 ಲಕ್ಷದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಾಗಿದ್ದು ಶೇ.50ರಷ್ಟು ಸಹಾಯಧನ ಸಿಗಲಿದೆ. ಅಂದರೆ ಈ ವರ್ಗದ ಮಹಿಳೆಯರು ಶೇ.50ರಷ್ಟು ಹಣ ಮರುಪಾವತಿಸುವಂತಿಲ್ಲ.

ಇದನ್ನೂ ಓದಿ: E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು
ಸಾಲ ಪಡೆಯಲು ಅರ್ಹತೆಗಳೇನು?
ಈ ಸಾಲ ಸೌಲಭ್ಯಕ್ಕೆ ಕುಟುಂಬದ ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ. 18ರಿಂದ 55 ವರ್ಷದೊಳಗಿನ ಮಹಿಳೆಯರು ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪಂಗಡದವರಾಗಿದ್ದಲ್ಲಿ ವಾರ್ಷಿಕ ಆದಾಯ 2 ಲಕ್ಷ ರೂಪಾಯಿಗಳ ಒಳಗಿರಬೇಕು.
ಸಾಮಾನ್ಯ ವರ್ಗದವರಾಗಿದ್ದಲ್ಲಿ ವಾರ್ಷಿಕ ಆದಾಯ 1.5 ಲಕ್ಷ ರೂಪಾಯಿಗಳ ಒಳಗಿರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಈ ಹಿಂದೆ ಅರ್ಜಿ ಸಲ್ಲಿಸಿ ಸಾಲ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳೇನು?
- ಜಾತಿ/ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಶಾಲಾ ವರ್ಗಾವಣೆ ಪತ್ರ
- ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ
- ಯೋಜನಾ ವರದಿ
- ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
ಇದನ್ನೂ ಓದಿ: PhonePe Personal Loan- ₹5 ಲಕ್ಷದ ವರೆಗೆ ಫೋನ್‌ಪೇ ಪರ್ಸನಲ್ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಹಾಕಿ…
ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ?
ಉದ್ಯೋಗಿನಿ ಯೋಜನೆಯಡಿ ಒಟ್ಟು 88 ವಿಧದ ಸ್ವಯಂ ಉದ್ಯೋಗವನ್ನು ಕೈಗೊಳ್ಳಬಹುದು. ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಉಪ್ಪಿನಕಾಯಿ, ಅಗರಬತ್ತಿ, ಕಾಫಿ-ಟೀ ಅಂಗಡಿ, ಟೈಲರಿಂಗ್, ಎಸ್‌ಟಿಡಿ ಬೂತ್, ಬ್ಯೂಟಿ ಪಾರ್ಲರ್, ಅಗರಬತ್ತಿ ತಯಾರಿಕೆ, ಕ್ಲಿನಿಕ್, ಜಿಮ್, ಸಿಹಿ ಅಂಗಡಿ, ಹಿಟ್ಟಿನ ಗಿರಣಿ, ಪೋಟೋ ಸ್ಟೂಡಿಯೋ, ಕಾಂಡಿಮೆಂಟ್ಸ್, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ 88ಕ್ಕೂ ಹೆಚ್ಚು ಪ್ರಮಾಣದ ಸಣ್ಣ ಉದ್ಯಮಗಳ ಆರಂಭಕ್ಕೆ ಸಾಲ ಸಿಗಲಿದೆ.
ಹೇಗೆ ಅರ್ಜಿ ಸಲಿಸುವುದು?
ಉದ್ಯೋಗಿನಿ ಯೋಜನೆಯ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ sevasindhu.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅದಕ್ಕಾಗಿ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 15-12-2025
ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಸಂಪರ್ಕಿಸಬಹುದಾಗಿದೆ.
- ಅಧಿಕೃತ ವೆಬ್ಸೈಟ್: kswdc.karnataka.gov.in



