ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ…
ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. ಇದರ ಪರಿಣಾಮವಾಗಿ, ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಇದನ್ನೂ ಓದಿ: September Heavy Rainfall- ಸೆಪ್ಟೆಂಬರ್ ತಿಂಗಳಲ್ಲಿ ಭಾರೀ ಮಳೆ ಮುಂದುವರಿಕೆ | ರಾಜ್ಯದಲ್ಲಿ ಒಂದು ವಾರ ಮಳೆ
ಜಿಲ್ಲಾವಾರು ಮಳೆ ಮಾಹಿತಿ
ಹವಾಮಾನ ಇಲಾಖೆಯ ವರದಿ ಪ್ರಕಾರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯ ಸಾಧ್ಯತೆ ಇದೆ.
ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಧ್ಯಮ ಪ್ರಮಾಣದ ಮಳೆ ಸಾಧ್ಯತೆ. ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಳೆಯ ಪ್ರಮಾಣ ಮಧ್ಯಮ ಮಟ್ಟದಲ್ಲಿ ಮುಂದುವರಿಯಲಿದೆ. ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 26°C ಹಾಗೂ ಕನಿಷ್ಠ ತಾಪಮಾನ 21°C ಇರಲಿದೆ.

ಇದನ್ನೂ ಓದಿ: Rural Godown Subsidy Scheme- ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…
ಹವಾಮಾನ ತಜ್ಞರ ಅಭಿಪ್ರಾಯ
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತ ಮುಂದಿನ ಕೆಲ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಸೆಪ್ಟೆಂಬರ್ ಮಧ್ಯಭಾಗದವರೆಗೂ ಮಳೆಯ ಚಟುವಟಿಕೆ ಬಿರುಸು ಪಡೆಯಲಿದೆ.
ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಹವಾಮಾನ ಮಾದರಿಗಳ ಪ್ರಕಾರ, ಮುಂದಿನ ವಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.