VB Gram G Scheme 2026: ಪ್ರತಿ ಕುಟುಂಬಕ್ಕೂ ವರ್ಷಕ್ಕೆ ₹47,750 ಆದಾಯ! ಗ್ರಾಮ ಪಂಚಾಯಿತಿಯಿಂದ ಅರ್ಜಿ ಆಹ್ವಾನ

Spread the love

WhatsApp Group Join Now
Telegram Group Join Now

VB Gram G Scheme 2026: ಪ್ರತಿ ಗ್ರಾಮೀಣ ಕುಟುಂಬಕ್ಕೆ ವರ್ಷಕ್ಕೆ 125 ದಿನ ಉದ್ಯೋಗ ಹಾಗೂ ₹47,750ವರೆಗೆ ಆದಾಯ ಗಳಿಸುವ ಅವಕಾಶ. ಈ ಯೋಜನೆಗೆ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಜೊತೆಗೆ ಸ್ಥಿರ ಆದಾಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಆಜೀವಿಕ ಮಿಷನ್ ಗ್ರಾಮೀಣ (ವಿ.ಬಿ. ಗ್ರಾಮ್ ಜಿ)’ (VB Gram G Scheme) ಯೋಜನೆ ಕರ್ನಾಟಕದಲ್ಲಿ ಅಧಿಕೃತವಾಗಿ ಜಾರಿಯಾಗಿದೆ.

ಹಲವು ಚರ್ಚೆಗಳು ಮತ್ತು ವಿವಾದಗಳ ನಡುವೆಯೇ ಜುಲೈ 1ರಿಂದ ಈ ಯೋಜನೆ ರಾಜ್ಯಾದ್ಯಂತ ಅನುಷ್ಠಾನಗೊಂಡಿದ್ದು, ಹಿಂದೆ ಜಾರಿಯಲ್ಲಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ-MGNREGA) ಇದೀಗ ಹೊಸ ಹೆಸರಿನಲ್ಲಿ ಮುಂದುವರಿಯುತ್ತಿದೆ.

ಇದನ್ನೂ ಓದಿ: Manipal Health Card 2026: ಈ ಕಾರ್ಡ್ ಇದ್ದರೆ ಮಣಿಪಾಲ್ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ | ಆರೋಗ್ಯ ಕಾರ್ಡ್-2026ಗೆ ಮೊಬೈಲ್‌ನಲ್ಲೇ ಅರ್ಜಿ ಹಾಕಿ

ವರ್ಷಕ್ಕೆ 125 ದಿನ ಉದ್ಯೋಗದ ಭರವಸೆ

ಈ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬಕ್ಕೂ ವರ್ಷಕ್ಕೆ 125 ದಿನಗಳ ಅಕುಶಲ ಉದ್ಯೋಗ ನೀಡಲಾಗುತ್ತದೆ. ಮಹಿಳೆ ಮತ್ತು ಪುರುಷರಿಗೆ ಸಮಾನವಾಗಿ ದಿನಕ್ಕೆ ₹382 ಕೂಲಿ ನಿಗದಿಪಡಿಸಲಾಗಿದೆ.

ಒಂದು ಕುಟುಂಬವು ಸಂಪೂರ್ಣ 125 ದಿನ ಕೆಲಸ ಮಾಡಿದರೆ ವಾರ್ಷಿಕವಾಗಿ ₹47,750 ಆದಾಯ ಗಳಿಸುವ ಅವಕಾಶ ದೊರೆಯುತ್ತದೆ. ಗ್ರಾಮೀಣ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ.

ಇದನ್ನೂ ಓದಿ: KFD Forest Watcher Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

318 ಬಗೆಯ ಕಾಮಗಾರಿಗಳಿಗೆ ಅವಕಾಶ

ಈ ಬಾರಿ ಯೋಜನೆಯನ್ನು ಕೇವಲ ಕೆಲವು ಕಾಮಗಾರಿಗಳಿಗೆ ಮಾತ್ರ ಸೀಮಿತಗೊಳಿಸಿಲ್ಲ. ಒಟ್ಟು 318 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗೆ ಸಂಬAಧಿಸಿದ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ.

ಕೃಷಿ ಹೊಂಡ ನಿರ್ಮಾಣ, ಹನಿ ನೀರಾವರಿ ವ್ಯವಸ್ಥೆ, ಕೆರೆ ಮತ್ತು ಕಾಲುವೆಗಳ ಅಭಿವೃದ್ಧಿ, ಚೆಕ್ ಡ್ಯಾಂ ನಿರ್ಮಾಣ ಸೇರಿದಂತೆ ಹಲವು ಕೆಲಸಗಳನ್ನು ಈ ಯೋಜನೆಯಡಿ ಕೈಗೊಳ್ಳಬಹುದು.

ಇದನ್ನೂ ಓದಿ: Karnataka Rain Forecast: ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್! ನಿಮ್ಮ ಜಿಲ್ಲೆಯಲ್ಲಿ ಎಷ್ಟು ಮಳೆ?

VB Gram G Scheme 2026
VB Gram G Scheme 2026

ರೈತರಿಗೆ ವಿಶೇಷ ವಿನಾಯಿತಿ

ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಬಿತ್ತನೆ ಹಾಗೂ ಕಟಾವು ಅವಧಿಯಲ್ಲಿ 60 ದಿನಗಳ ಕಾಲ ಯೋಜನೆಯಿಂದ ಅಧಿಕೃತ ಬಿಡುವು ನೀಡಲಾಗಿದೆ. ಇದರಿಂದ ರೈತರು ಕೃಷಿ ಕೆಲಸಗಳಿಗೆ ಆದ್ಯತೆ ನೀಡುವ ಜೊತೆಗೆ ಉಳಿದ ಅವಧಿಯಲ್ಲಿ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: Karnataka Voter List Revision: ಮತದಾರರ ಪಟ್ಟಿಯಿಂದ 47 ಲಕ್ಷ ಹೆಸರುಗಳು ಔಟ್! ನಿಮ್ಮ ಹೆಸರು ಇದೆಯೇ? ಈಗಲೇ ಚೆಕ್ ಮಾಡಿ

ಅರ್ಜಿ ಸಲ್ಲಿಸುವುದು ಹೇಗೆ?

ಯೋಜನೆಯ ಪ್ರಯೋಜನ ಪಡೆಯಲು ಆಸಕ್ತರು ನಮೂನೆ-6ರಲ್ಲಿ ಉದ್ಯೋಗದ ಬೇಡಿಕೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಬಳಿಕ ಸಾಧ್ಯವಾದಷ್ಟು ತಮ್ಮ ಸ್ವಂತ ಗ್ರಾಮದಲ್ಲಿಯೇ ಉದ್ಯೋಗ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

₹2,900 ಕೋಟಿ ಬಿಡುಗಡೆ

WhatsApp Group Join Now
Telegram Group Join Now

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwar Khandre) ಅವರ ಮಾಹಿತಿ ಪ್ರಕಾರ, ಜುಲೈ 1ರಿಂದ ಜಾರಿಗೆ ಬಂದಿರುವ ಯೋಜನೆಯ ಮೊದಲ ತ್ರೈಮಾಸಿಕಕ್ಕೆ ₹2,900 ಕೋಟಿ ಬಿಡುಗಡೆ ಮಾಡಲಾಗಿದೆ.

ಇದರಲ್ಲಿ ಕೇಂದ್ರ ಸರ್ಕಾರ ₹1,700 ಕೋಟಿ ಹಾಗೂ ರಾಜ್ಯ ಸರ್ಕಾರ ₹1,200 ಕೋಟಿ ನೀಡಿದೆ. ಈ ಅನುದಾನದ ಮೂಲಕ ಪ್ರತಿ ತಿಂಗಳು ಸುಮಾರು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.

ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

ಬರದಿಂದ ಗುಳೆ ಹೋಗುವ ಅಗತ್ಯವಿಲ್ಲ

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕೃಷಿ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆ ಜಿಲ್ಲೆ ಅಥವಾ ರಾಜ್ಯಗಳಿಗೆ ಗುಳೆ ಹೋಗುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಉದ್ಯೋಗ ಕೇಳಿ ಬರುವ ಪ್ರತಿಯೊಬ್ಬ ಅರ್ಹರಿಗೂ ಸ್ಥಳೀಯ ಮಟ್ಟದಲ್ಲೇ ಕೆಲಸ ನೀಡುವಂತೆ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 18 Lakh Pension Stopped: ರಾಜ್ಯದಲ್ಲಿ 18 ಲಕ್ಷಕ್ಕೂ ಹೆಚ್ಚು ಜನರ ಪಿಂಚಣಿ ಬಂದ್ | ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ

ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ, ಆದಾಯ ಹಾಗೂ ಸ್ಥಳೀಯ ಅಭಿವೃದ್ಧಿಯನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಉದ್ದೇಶದಿಂದ ವಿ.ಬಿ. ಗ್ರಾಮ್ ಜಿ ಯೋಜನೆ ಜಾರಿಗೆ ಬಂದಿದೆ.

ವರ್ಷಕ್ಕೆ ₹47,750ವರೆಗೆ ಆದಾಯ ಗಳಿಸುವ ಅವಕಾಶ ಇರುವುದರಿಂದ ಅರ್ಹರು ತಮ್ಮ ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ.

Karnataka Voter List Revision: ಮತದಾರರ ಪಟ್ಟಿಯಿಂದ 47 ಲಕ್ಷ ಹೆಸರುಗಳು ಔಟ್! ನಿಮ್ಮ ಹೆಸರು ಇದೆಯೇ? ಈಗಲೇ ಚೆಕ್ ಮಾಡಿ


Spread the love
error: Content is protected !!