ರೈತರಿಗೆ ₹5 ಲಕ್ಷ ಶೂನ್ಯಬಡ್ಡಿ ಸಾಲ ವಿತರಣೆ | ಈ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ… Zero Interest Agricultural Loans

Spread the love

Zero Interest Agricultural Loans : ರೈತರಲ್ಲಿ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಆಹಾರೋತ್ಪಾದನೆಯಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ರಾಜ್ಯ ಸರಕಾರ ಬರೋಬ್ಬರಿ 25,000 ಕೋಟಿ ರೂಪಾಯಿ ಸಾಲ ವಿತರಣೆಯ (Loan Disbursement) ಗುರಿ ಹೊಂದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now

ನಿನ್ನೆ (ಜುಲೈ 16) ವಿಧಾನ ಪರಿಷತ್ತಿನಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ ಸಾಲಿನಲ್ಲಿ ಎಷ್ಟು ರೈತರಿಗೆ ಎಷ್ಟೆಷ್ಟು ಸಾಲ ವಿತರಣೆ ಮಾಡಲಾಗಿದೆ, ಈ ಸಾಲಿನಲ್ಲಿ ವಿತರಣೆ ಆಗುವ ಸಾಲದ ಮೊತ್ತವೆಷ್ಟು? ಬಡ್ಡಿ ಇಲ್ಲದೇ ನೀಡಲಾಗುವ 5 ಲಕ್ಷ ರೂಪಾಯಿ ಅಲ್ಪಾವಧಿ ಸಾಲವನ್ನು ಯಾವೆಲ್ಲ ರೈತರು ಪಡೆಯಲು ಅರ್ಹರು? ಎಂಬ ಇತ್ಯಾದಿ ಮಾಹಿತಿಯನ್ನು ಒದಗಿಸಿದ್ದಾರೆ.

ಹಾಗಾದರೆ ರೈತರು ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರಲ್ಲಿ (Zero Interest) ಸಿಗುವ ಅಲ್ಪಾವಧಿ ಸಾಲ, ಅತೀ ಕಡಿಮೆ ಬಡ್ಡಿಯಲ್ಲಿ ಸಿಗುವ ಮಧ್ಯಮಾವಧಿ ಸಾಲ ಹಾಗೂ ದೀರ್ಘಾವಧಿ ಸಾಲ ಪಡೆಯುವುದು ಹೇಗೆ? ಈ ಸಾಲ ಪಡೆಯಲು ಏನೆಲ್ಲ ಅರ್ಹತೆ ಬೇಕು? ಬೇಕಾಗುವ ದಾಖಲಾತಿಗಳೇನು? ಇತ್ಯಾದಿ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ….

ಸರಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗಲಿದೆ ಬಂಪರ್ ಸಂಬಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… Revised Salary of Govt Employees

15.10 ಲಕ್ಷ ರೈತರಿಗೆ 25,000 ಕೋಟಿ ಸಾಲ

ಸಹಕಾರ ಸಚಿವ ಕೆ. ಎನ್ ರಾಜಣ್ಣ ಅವರು ರೈತರಿಗೆ ಸಕಾಲಕ್ಕೆ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದ್ದು; ಕಳೆದ ಸಾಲಿನಲ್ಲಿ ವಿತರಣೆಯಾದ ಸಾಲ ಹಾಗೂ ಈ ಸಾಲಿನಲ್ಲಿ ವಿತರಣೆ ಆಗಲಿರುವ ಸಾಲದ ವಿವರ ಈ ಕೆಳಗಿನಂತಿದೆ:

  • ಪ್ರಾಥಮಿಕ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕುಗಳ ಮೂಲಕ 2023-24ನೇ ಸಾಲಿನಲ್ಲಿ ಒಟ್ಟು 29,26,910 ರೈತರಿಗೆ 22,982.10 ಕೋಟಿ ರೂಪಾಯಿ ಬೆಳೆ ಸಾಲ ವಿತರಣೆ ಮಾಡಲಾಗಿದೆ.
  • 2024-25ನೇ ಸಾಲಿಗೆ 35.10 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 25,000 ಕೋಟಿ ರೂಪಾಯಿ ಅಲ್ಪಾವಧಿ ಕೃಷಿ ಸಾಲ ಮತ್ತು ಪಶುಸಂಗೋಪನೆಗೆ ದುಡಿಯುವ ಬಂಡವಾಳ ಸಾಲ ವಿತರಿಸಲು ಗುರಿ ಹೊಂದಲಾಗಿದೆ.
  • ಇದೇ ಸಾಲಿಗೆ 0.90 ಲಕ್ಷ ರೈತರಿಗೆ 2,000 ಕೋಟಿ ರೂಪಾಯಿ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಕೃಷಿ ಸಾಲ ವಿತರಿಸುವ ಗುರಿ ನಿಗದಿಪಡಿಸಿದ್ದು, 2566.02 ಕೋಟಿ ರೂಪಾಯಿ ಕೃಷಿ ಸಾಲ ವಿತರಿಸಲಾಗುವುದು.
  • ಈಗಾಗಲೇ 2024ರ ಜುಲೈ 6ರ ವರೆಗೆ 7,80,363 ರೈತರಿಗೆ 6799.17 ಕೋಟಿ ರೂಪಾಯಿ ಬೆಳೆ ಸಾಲ ವಿತರಿಸಲಾಗಿದೆ. ಮೂರು ವರ್ಷಗಳಲ್ಲಿ ಸಾಲ ವಿತರಿಸಲಾಗಿದೆ.
  • ಡಿ.ಸಿ.ಸಿ ಬ್ಯಾಂಕುಗಳಲ್ಲಿರುವ ಬಂಡವಾಳ ಮತ್ತು ನಬಾರ್ಡ್ ಪುನರ್ಧನ ಆಧರಿಸಿ ರಾಜ್ಯದ ಪ್ರತಿ ಜಿಲ್ಲೆಗೆ ಸರಾಸರಿ 1.13 ಲಕ್ಷ ರೈತರಿಗೆ 806 ಕೋಟಿ ರೂಪಾಯಿ ಅಲ್ಪಾವಧಿ ಕೃಷಿ ಸಾಲ ವಿತರಿಸಲು ಉದ್ದೇಶಿಸಲಾಗಿದೆ.

ಮಹಿಳೆಯರಿಗೆ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ | 1.5 ಲಕ್ಷ ರೂಪಾಯಿ ಸಬ್ಸಿಡಿ | ಈ ಸೌಲಭ್ಯ ಪಡೆಯುವುದು ಹೇಗೆ? ಮಾಹಿತಿ ಇಲ್ಲಿದೆ… Udyogini Women Loan Scheme 2024

ಪ್ರತಿ ರೈತರಿಗೂ ಶೂನ್ಯಬಡ್ಡಿ ಸಾಲ 

ಕಳೆದ ವರ್ಷದ ವರೆಗೂ 3 ಲಕ್ಷ ರೂಪಾಯಿ ಇದ್ದ ಶೂನ್ಯ ಬಡ್ಡಿದರ ಸಾಲದ ಮೊತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿಗೆ ಏರಿಕೆ ಮಾಡಿದ್ದಾರೆ. ಆದರೆ, ಈ ಅನುಕೂಲವು ಅನುಕೂಲಸ್ತ ರೈತರಿಗೆ ಮಾತ್ರ ಸಿಗುತ್ತಿದೆ. ಈ ಸಾಲವು ಚಡ್ಡಿ ಹಾಕಿಕೊಂಡು ಹೊಲದಲ್ಲಿ ದುಡಿಯುವ ರೈತರಿಗೂ ಸಿಗುವಂತಾಗಬೇಕು ಎಂದು ಶಾಸಕ ದಿನೇಶ ಗೂಳಿಗೌಡ ಅವರು ಹೇಳಿದರು.

ಅಲ್ಪಾವಧಿ ಬೆಳೆ ಸಾಲವಾಗಿ ವಿತರಿಸುವ 5 ಲಕ್ಷ ರೂಪಾಯಿಗೆ ಶೂನ್ಯ ಬಡ್ಡಿ ದರ ಸಾಲವನ್ನು ಎಲ್ಲರಿಗೂ ನೀಡಲು ಬರುವುದಿಲ್ಲ. ಆಯಾ ರೈತರ ಜಮೀನು, ಬೆಳೆ, ಇಳುವರಿಗಳ ಮೇಲೆ ಅವಲಂಬಿತವಾಗಿರುತ್ತದೆ. ಅವರವರ ಎಲಿಜಬಲಿಟಿಯನ್ನು ಪರಾಮರ್ಶಿಸಿ ಸಾಲವನ್ನು ವಿತರಣೆ ಮಾಡಲಾಗುತ್ತದೆ ಎಂದು ಸಹಕಾರ ಸಚಿವರು ಮಾಹಿತಿ ನೀಡಿದ್ದಾರೆ.

Zero Interest Agricultural Loans

ಕಡಿಮೆ ಬಡ್ಡಿಯಲ್ಲಿ ಪರ್ಸನಲ್ ಲೋನ್ ಪಡೆಯಲು ಈ ಬ್ಯಾಂಕುಗಳು ಬೆಸ್ಟ್ | ಟಾಪ್ ಫೈವ್ ಬ್ಯಾಂಕುಗಳ ಮಾಹಿತಿ ಇಲ್ಲಿದೆ… Low interest rate on personal loans

ಏನಿದು ಶೂನ್ಯ ಬಡ್ಡಿ ಸಾಲ?

ರಾಜ್ಯದ ರೈತರಿಗೆ ಸರಕಾರವು ಶೇಕಡಾ 3ರ ಬಡ್ಡಿ ದರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬAಧಿತ ಸಾಲಗಳನ್ನು ವಿತರಿಸುವ ಯೋಜನೆಯನ್ನು 2004ರಲ್ಲಿ ಅನುಷ್ಠಾನಗೊಳಿಸಿದೆ.

2012-13ರಲ್ಲಿ 1 ಲಕ್ಷ ರೂಪಾಯಿ ವರೆಗೆ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿತ್ತು. 2013-14ನೇ ಸಾಲಿಗೆ 2 ಲಕ್ಷ ರೂಪಾಯಿ ಹಾಗೂ 2014-15ನೇ ಸಾಲಿನಿಂದ 3 ಲಕ್ಷ ರೂಪಾಯಿಗೆ ಶೂನ್ಯ ಬಡ್ಡಿ ಸಾಲ ಮಿತಿ ಹೆಚ್ಚಿಸಲಾಯಿತು. 2023ರಲ್ಲಿ ಹಾಲಿ ಕಾಂಗ್ರೆಸ್ ಸರಕಾರ 3ರಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿದೆ.

ಕುರಿ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣಕ್ಕೆ ₹5 ಲಕ್ಷದ ವರೆಗೆ ಆರ್ಥಿಕ ನೆರವು Mgnrega Personal Work Subsidy

ಯಾವೆಲ್ಲ ಬ್ಯಾಂಕುಗಳು ಸಾಲ ನೀಡುತ್ತವೆ?

ಬಿತ್ತನೆ ಬೀಜ, ಗೊಬ್ಬರ, ಔಷಧಿ, ಕೃಷಿ ಉಪಕರಣ ಖರೀದಿ ಸೇರಿದಂತೆ ರೈತರ ಕೃಷಿ ಚಟುವಟಿಕೆಗೆ ನೆರವಾಗಲೆಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿAದ (ಡಿಸಿಸಿ) ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತವೆ.

ಕೃಷಿ ಚಚುವಟಿಕೆಗಷ್ಟೇ ಅಲ್ಲದೇ, ಕೃಷಿ ಉಪಕಸುಬುಗಳಾದ ಕುರಿ, ಮೇಕೆ, ಕೋಳಿ, ಹಂದಿ ಸಾಕಾಣಿಕೆಗೆ ಹಾಗೂ ರೇಷ್ಮೆ ಶೆಡ್ ನಿರ್ಮಾಣಕ್ಕೂ ಇನ್ಮುಂದೆ 5 ಲಕ್ಷ ರೂಪಾಯಿ ವರೆಗೆ ಸಾಲ ಸಿಗಲಿದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ-ಮೇಕೆ ಸಾಕಾಣಿಕೆಗೆ ₹1.75 ಲಕ್ಷ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ Amrita Swabhimani Kurigahi Scheme

ಸಾಲ ಪಡೆಯಲು ಯಾರೆಲ್ಲ ಅರ್ಹರು?

ಗಮನಾರ್ಹವೆಂದರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ಎಲ್ಲಾ ರೈತರಿಗೆ ಈ ಸಾಲ ಸಿಗುವುದಿಲ್ಲ. ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ಸದಸ್ಯತ್ವ ಹೊಂದಿದ್ದರೆ ಮಾತ್ರ ಅವರಿಗೆ ಬ್ಯಾಂಕುಗಳಿ೦ದ ಸಾಲ ಸೌಲಭ್ಯ ಸಿಗಲಿದೆ.

ರೈತರು ಜಮೀನು ಹೊಂದಿರುವ ವ್ಯಾಪ್ತಿಯಲ್ಲಿರುವ ಸಹಕಾರ ಸಂಘಗಳಲ್ಲಿ ಮಾತ್ರ ಸಾಲ ಪಡೆಯಲು ಅರ್ಹರಾಗಿರುತ್ತಾರೆ. ಬೇರೆ ಯಾವ ಸೊಸೈಟಿಯಿಂದಲೂ ಸಾಲ ಪಡೆದಿರಬಾರದು. ಕರ್ನಾಟಕದಲ್ಲಿ ಭೂಮಿ ಹೊಂದಿ ನೆರೆ ರಾಜ್ಯದಲ್ಲಿ ವಾಸವಿದ್ದರೆ ಅಂತಹ ರೈತರಿಗೆ ಈ ಸಾಲ ಯೋಜನೆ ಅನ್ವಯವಾಗುವುದಿಲ್ಲ.

ಎರಡು ಸಂಘಗಳ ಕಾರ್ಯ ವ್ಯಾಪ್ತಿಯಲ್ಲಿ ಬೇರೆ ಬೇರೆ ಭೂಮಿ ಹೊಂದಿದ್ದರೆ ಅಥವಾ ಭೂಮಿ ಮತ್ತು ವಾಸಸ್ಥಳ ವಿವಿಧ ಸಂಘದ ವ್ಯಾಪ್ತಿಯಲ್ಲಿದ್ದರೆ ಯಾವ ಸಂಘದ ವ್ಯಾಪ್ತಿಯಲ್ಲಿ ವಾಸವಿರುತ್ತಾನೆಯೋ ಆ ಸಂಘದಲ್ಲಿ ಪಡೆದ ಸಾಲಗಳಿಗೆ ಮಾತ್ರ ಬಡ್ಡಿ ಸಹಾಯಧನ ಅನ್ವಯವಾಗುತ್ತದೆ.

ಈ ರೈತರ ಬಗರ್ ಹುಕುಂ ಜಮೀನು ಸಕ್ರಮ | ಕಂದಾಯ ಸಚಿವರ ಸೂಚನೆ Bagar Hukum land Sakrama

ಏನೆಲ್ಲ ದಾಖಲೆಗಳು ಬೇಕು?

ಬಹುಮುಖ್ಯವಾಗಿ ಡಿಸಿಸಿ ಬ್ಯಾಂಕಿನಿ೦ದ ಸಾಲ ಪಡೆಯಬೇಕಾದರೆ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಲ್ಲಿ ಸದಸ್ಯತ್ವ ಹೊಂದಿರಬೇಕು.

ಪಹಣಿ, ಆಧಾರ್ ಕಾರ್ಡ್ ಇರಬೇಕು. ರೈತರು ಯಾವ ಬ್ಯಾಂಕಿನಿAದ ಸಾಲ ಪಡೆಯಲಿಚ್ಚಿಸುತ್ತಾರೋ ಅಲ್ಲಿಂದ ಅರ್ಜಿ ಪಡೆದುಕೊಳ್ಳಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಎಸ್‌ಸಿ/ಎಸ್‌ಟಿ ಸಮುದಾಯದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

ರೈತರ 2 ಲಕ್ಷ ರೂಪಾಯಿ ಸಾಲಮನ್ನಾ | ₹31 ಸಾವಿರ ಕೋಟಿ ಅನುದಾನ Farmers Loan Waiver


Spread the love
WhatsApp Group Join Now
Telegram Group Join Now
error: Content is protected !!